87
ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ
ಕೋರಹೀಯರ ಕೀರ್ತನೆ; ಗೀತೆ.
ಯೆಶಾ 2:2-4; 19:19-24
ಯೆಹೋವನು ಸ್ಥಾಪಿಸಿದ ಪಟ್ಟಣವು
ಪರಿಶುದ್ಧ ಪರ್ವತದ ಮೇಲಿದೆ.
ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,
ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
“ರಹಬ* 87:4 ರಹಬ ಅಥವಾ ಐಗುಪ್ತ., ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.
ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;
ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,
“ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು.
ಸೆಲಾ
ಇವರು ಹಾಡುತ್ತಾ, ಕುಣಿಯುತ್ತಾ,
“ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

*87:4 87:4 ರಹಬ ಅಥವಾ ಐಗುಪ್ತ.