4
1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು
†ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು,
‡“ಇಲ್ಲಿಗೆ ಏರಿ ಬಾ,§ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
2 ಕೂಡಲೆ ನಾನು
*ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ
†ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
3 ಕುಳಿತಿದ್ದವನು ಕಣ್ಣಿಗೆ
‡ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ
§ಕಾಮನಬಿಲ್ಲು ಇತ್ತು.
4 ಇದಲ್ಲದೆ ಸಿಂಹಾಸನದ ಸುತ್ತಲೂ
*ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ
†ಶುಭ್ರವಸ್ತ್ರ ಧರಿಸಿಕೊಂಡಿದ್ದ
‡ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು.
§ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
5 ಸಿಂಹಾಸನದಿಂದ
*ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ
†ದೇವರ ಏಳು ಆತ್ಮಗಳನ್ನು ಸೂಚಿಸುವ
‡ಏಳು ದೀಪಗಳು ಉರಿಯುತ್ತಿದ್ದವು.
6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ
§ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ
*ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.
8 ಆ ನಾಲ್ಕು ಜೀವಿಗಳಿಗೆ
†ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು.
‡ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ,
§“ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು,
*ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,
10-11 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ
†ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ
‡ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ,
§ ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ.
*ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.