2
ಯೆಹೂದ್ಯರಾದರೂ ಅಪರಾಧಿಗಳೇ
1 ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, * 2:1 ರೋಮಾ. 1:20ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, † 2:1 ಮತ್ತಾ 7:2ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. 2 ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. 3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ? 4 ಅಥವಾ ಆತನ ‡ 2:4 ಎಫೆ 1:17,18; 2:4,7ಅಪಾರವಾದ ದಯೆ, § 2:4 ರೋಮಾ. 3:26ಸಹನೆ, * 2:4 ರೋಮಾ. 9:22ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ † 2:4 2 ಪೇತ್ರ 3:9,15ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ? 5 ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. 6 ‡ 2:6 ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, 7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. 8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. 9 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ § 2:9 ಯೆಹೆ. 18:20ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. 10 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. * 2:10 ರೋಮಾ. 1:16 11 † 2:11 ಅ. ಕೃ. 10:34ದೇವರಲ್ಲಿ ಪಕ್ಷಪಾತವಿಲ್ಲ.
12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು. 13 ‡ 2:13 ಯಾಕೋಬ 1:22,23ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. 14 ಧರ್ಮಶಾಸ್ತ್ರವಿಲ್ಲದ ಅನ್ಯಜನರು § 2:14 ರೋಮಾ. 1:19ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ. 15 ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. 16 * 2:16 ರೋಮಾ. 16:25,26; 2 ತಿಮೊ. 2:8; ಗಲಾ. 1:11ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ † 2:16 ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
17 ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ, 18 ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ. 19 ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ‡ 2:19 ಮತ್ತಾ 15:14ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ, 20 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ, 21 § 2:21 ಮತ್ತಾ 23:3-28; 15:1-9ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು? 22 ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು? 23 ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ? 24 * 2:24 ಯೆಶಾ 52:5; ಯೆಹೆ. 36:20“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
25 † 2:25 ಗಲಾ. 5:3ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು. 26 ಹೀಗಿರಲಾಗಿ ‡ 2:26 ಎಫೆ 2:11ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ? 27 ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ. 28 § 2:28 ರೋಮಾ. 6-8; ಗಲಾ. 6:15; ರೋಮಾ 2:17ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. 29 ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು * 2:29 ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, † 2:29 2 ಕೊರಿ 10:18ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
*2:1 2:1 ರೋಮಾ. 1:20
†2:1 2:1 ಮತ್ತಾ 7:2
‡2:4 2:4 ಎಫೆ 1:17,18; 2:4,7
§2:4 2:4 ರೋಮಾ. 3:26
*2:4 2:4 ರೋಮಾ. 9:22
†2:4 2:4 2 ಪೇತ್ರ 3:9,15
‡2:6 2:6 ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10
§2:9 2:9 ಯೆಹೆ. 18:20
*2:10 2:10 ರೋಮಾ. 1:16
†2:11 2:11 ಅ. ಕೃ. 10:34
‡2:13 2:13 ಯಾಕೋಬ 1:22,23
§2:14 2:14 ರೋಮಾ. 1:19
*2:16 2:16 ರೋಮಾ. 16:25,26; 2 ತಿಮೊ. 2:8; ಗಲಾ. 1:11
†2:16 2:16 ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22
‡2:19 2:19 ಮತ್ತಾ 15:14
§2:21 2:21 ಮತ್ತಾ 23:3-28; 15:1-9
*2:24 2:24 ಯೆಶಾ 52:5; ಯೆಹೆ. 36:20
†2:25 2:25 ಗಲಾ. 5:3
‡2:26 2:26 ಎಫೆ 2:11
§2:28 2:28 ರೋಮಾ. 6-8; ಗಲಾ. 6:15; ರೋಮಾ 2:17
*2:29 2:29 ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11
†2:29 2:29 2 ಕೊರಿ 10:18