13
ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ
1 * 13:1 ತೀತ 3:1, 1 ಪೇತ್ರ. 2:13ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ † 13:1 ಯೋಹಾ 19:11ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. 2 ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. 4 ‡ 13:4 2 ಪೂರ್ವ 19:6ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. 7 § 13:7 ಮತ್ತಾ, 17:25, ಮಾರ್ಕ 12:17ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. * 13:8 ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. 9 ಹೇಗೆಂದರೆ † 13:9 ವಿಮೋ 20:13-17, ಮತ್ತಾ 19:18“ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು ‡ 13:9 ಯಾಜ 19:18“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. 10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. § 13:10 ರೋಮಾ. 13:18, ಯೋಹಾ 14:15ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
11 * 13:11 1 ಕೊರಿ 15:34. ಎಫೆ 5:14, 1 ಥೆಸ. 5:6ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. † 13:11 ಯೆಶಾ 56:1, ಲೂಕ 21:28ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. 12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ‡ 13:12 2 ಕೊರಿ 6:7, ಎಫೆ 6:11-13, 1 ಥೆಸ. 5:8ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. 13 § 13:13 ಲೂಕ 21:34,ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ * 13:13 ಯಾಕೋಬ. 3:14-16ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14 † 13:14 ಗಲಾ. 5:16ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ‡ 13:14 ಗಲಾ. 21:34. ಕೊಲೊ 3:10ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
*13:1 13:1 ತೀತ 3:1, 1 ಪೇತ್ರ. 2:13
†13:1 13:1 ಯೋಹಾ 19:11
‡13:4 13:4 2 ಪೂರ್ವ 19:6
§13:7 13:7 ಮತ್ತಾ, 17:25, ಮಾರ್ಕ 12:17
*13:8 13:8 ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34
†13:9 13:9 ವಿಮೋ 20:13-17, ಮತ್ತಾ 19:18
‡13:9 13:9 ಯಾಜ 19:18
§13:10 13:10 ರೋಮಾ. 13:18, ಯೋಹಾ 14:15
*13:11 13:11 1 ಕೊರಿ 15:34. ಎಫೆ 5:14, 1 ಥೆಸ. 5:6
†13:11 13:11 ಯೆಶಾ 56:1, ಲೂಕ 21:28
‡13:12 13:12 2 ಕೊರಿ 6:7, ಎಫೆ 6:11-13, 1 ಥೆಸ. 5:8
§13:13 13:13 ಲೂಕ 21:34,
*13:13 13:13 ಯಾಕೋಬ. 3:14-16
†13:14 13:14 ಗಲಾ. 5:16
‡13:14 13:14 ಗಲಾ. 21:34. ಕೊಲೊ 3:10