ಕೀರ್ತನೆ 82
ಆಸಾಫನ ಕೀರ್ತನೆ.
1 ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ,
ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.
2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ.
ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?
3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ.
ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.
4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ.
ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.
5 “ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ.
ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.
6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು,
ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.
7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ.
ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”
8 ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ.
ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.