ಕೀರ್ತ. 130. ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.